ಕರ್ನಾಟಕದ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ ಶೇ. 66.14% ರಷ್ಟು ಫಲಿತಾಂಶ ಬಂದಿದೆ.
ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 625 ಅಂಕಗಳಲ್ಲಿ 625 ಅಂಕ ಗಳಿಸಿದ್ದಾರೆ.
ದಕ್ಷಿಣ ಕನ್ನಡ (ಶೇ.91.12) ಪ್ರಥಮ, ಉಡುಪಿ (ಶೇ. 89.96) ದ್ವಿತೀಯ ಹಾಗೂ ಉತ್ತರ ಕನ್ನಡ (83.19) ತೃತೀಯ ಸ್ಥಾನ ಪಡೆದಿದೆ.
ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕನೇ ಸ್ಥಾನ ಪಡೆದಿದ್ದು, ಶೇ. 42.43% ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿ ಇದೆ.
ಪ್ರತಿ ಬಾರಿಯಂತೆ ಈ ಸಲವು ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.